ಕರ್ನಾಟಕ

karnataka

ETV Bharat / state

ಹಾಸನದಲ್ಲಿಂದು 135 ಕೋವಿಡ್‌ ಪ್ರಕರಣ ಪತ್ತೆ

ಇಂದು ಹಾಸನದಲ್ಲಿ ಬಿಡುಗಡೆಯಾದ 210 ಜನರು ಸೇರಿ ಈವರೆಗೆ 21,776 ಮಂದಿ ಗುಣಮುಖರಾಗಿದ್ದಾರೆ. 1,854 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 44 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

covid
ಕೋವಿಡ್

By

Published : Oct 24, 2020, 4:48 PM IST

ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 135 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 24,044 ಕ್ಕೆ ಏರಿಕೆಯಾಗಿದೆ. ಒಬ್ಬರ ಸಾವಿನೊಂದಿಗೆ ಮೃತರ ಸಂಖ್ಯೆ 414 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 210 ಜನರು ಸೇರಿ ಈವರೆಗೆ 21,776 ಮಂದಿ ಗುಣಮುಖರಾಗಿದ್ದಾರೆ. 1,854 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 44 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದ ಇಂದಿನ ಕೋವಿಡ್​ ವಿವರ

ತಾಲೂಕುವಾರು ಪ್ರಕರಣ:
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-6, ಅರಕಲಗೂಡು-19, ಅರಸೀಕೆರೆ-1, ಬೇಲೂರು-9, ಚನ್ನರಾಯಪಟ್ಟಣ-0, ಹಾಸನ-87, ಹೊಳೆನರಸೀಪುರ-7, ಸಕಲೇಶಪುರ-6, ಇತರೆ- 0 ಒಟ್ಟು 135 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಆರೋಗ್ಯಧಿಕಾರಿ ಮನವಿ :
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ABOUT THE AUTHOR

...view details