ಹಾಸನ: ನಗರದ ಇಬ್ಬರು ಸೇರಿ ಇಂದು 14 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 99ಕ್ಕೆ ಏರಿಕೆಯಾಗಿದೆ.
ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಮಹಿಳೆಯೊಬ್ಬರಿಗೆ ಸೋಂಕು ತಗುಲಿದ್ದು, ಉಳಿದವರು ಮುಂಬೈ ಪ್ರಯಾಣ ಹಿನ್ನಲೆ ಹೊಂದಿದ್ದಾರೆ. ಇಂದಿರಾ ನಗರ ಮತ್ತು ಉತ್ತರ ಬಡಾವಣೆಯ ಕೆಲ ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ, ಬ್ಯಾರಿಕೇಡ್ ಹಾಕಲಾಗಿದೆ.
ಬೆಂಗಳೂರಿನಿಂದ ಬಂದಿದ್ದ ಮಹಿಳೆಯಲ್ಲಿ ಕೆಮ್ಮು ಕಂಡ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದ ನಂತರ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಮಹಿಳೆ ವಾಸವಿದ್ದ ಸ್ಥಳವನ್ನು 28 ದಿನಗಳ ಕಾಲ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ, ನಗರಸಭೆ ಅಧಿಕಾರಿಯನ್ನು ಮೇಲ್ವಿಚಾರಣೆಗೆ ನೇಮಿಸಲಾಗಿದೆ. ಅಗತ್ಯವಿದ್ದಲ್ಲಿ ಜನರ ಗಂಟಲು ದ್ರವ ಪರೀಕ್ಷೆಗೆ ಪಡೆಯಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.
ಪೊಲೀಸ್ ಕಾನ್ಸ್ಟೇಬಲ್ಗೂ ಸೋಂಕು