ಹಾಸನ:ಮೊಬೈಲ್ ಬಳಕೆ ಕಡಿಮೆ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ ಬಾಲಕಿಯೊಬ್ಬಳು ಕೆರೆಗೆ ಹಾರಿ ಪ್ರಾಣಬಿಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯ ಪ್ರಾಣಕ್ಕೆ ಎರವಾದ ಮೊಬೈಲ್ ಗೀಳು... ಪೋಷಕರು ಬುದ್ಧಿ ಹೇಳಿದ್ದಕ್ಕೆ ಮಗಳು ಆತ್ಮಹತ್ಯೆ! - ಬಾಲಕಿ ಆತ್ಮಹತ್ಯೆ
ಮೊಬೈಲ್ನ್ನು ಕಡಿಮೆ ಬಳಸುವಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ನೊಂದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಾಸನ ಜಿಲ್ಲೆಯಲ್ಲಿ ಈ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಮೊಬೈಲ್ ಕಡಿಮೆ ಬಳಸು ಎಂದು ಬುದ್ಧಿಮಾತು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕಿ
14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಗರದ ಗೌರಿಕೊಪ್ಪಲು ನಿವಾಸಿಯಾದ ಬಾಲಕಿ 9 ನೇ ತರಗತಿ ಓದುತ್ತಿದ್ದಳು. ಸದ್ಯಕ್ಕೆ ಶಾಲೆಗೆ ರಜೆಯಿದ್ದು, ಮನೆಯಲ್ಲೇ ಇದ್ದ ಕಾರಣ ಈಕೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದಳು. ಇದನ್ನು ಗಮನಿಸಿದ ಪೋಷಕರು ಕಡಿಮೆ ಬಳಸುವಂತೆ ಮಾಡುವಂತೆ ಬುದ್ಧಿವಾದ ಹೇಳಿದ್ದರು.
ಇದರಿಂದ ಮನನೊಂದ ಬಾಲಕಿ ಸತ್ಯಮಂಗಲ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.