ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಇಂದು 145 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕು; ಮೂವರು ಬಲಿ - Hassan corona latest news

ಮಹಾಮಾರಿ ಕೊರೊನಾ ಮುಷ್ಠಿಗೆ ಇಂದು ಹಾಸನದಲ್ಲಿ ಮೂವರು ಮೃತಪಟ್ಟಿದ್ದು, 145 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ.

hassan
ಡಾ. ಸತೀಶ್

By

Published : Aug 16, 2020, 5:58 PM IST

ಹಾಸನ: ಮಹಾಮಾರಿ ಕೊರೊನಾಗೆ ಹಾಸನ ಜಿಲ್ಲೆಯಲ್ಲಿ‌ ಇಂದು ಮೂವರು ಮೃತಪಟ್ಟಿದ್ದು, 145 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಕೊರೊನಾ ಮಾಹಿತಿ ನೀಡಿದ ಆರೋಗ್ಯಾಧಿಕಾರಿ ಡಾ. ಸತೀಶ್

ಶನಿವಾರ ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರಿನಲ್ಲಿ 4, ಅರಕಲಗೂಡು-3, ಅರಸೀಕೆರೆ-51, ಬೇಲೂರು-6, ಚನ್ನರಾಯಪಟ್ಟಣ-7, ಹಾಸನ-55, ಹೊಳೆನರಸೀಪುರ-15, ಸಕಲೇಶಪುರದಲ್ಲಿ 4 ಪ್ರಕರಣ ಸೇರಿ, ಒಟ್ಟು 145 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಇದುವರೆಗೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,571 ಕ್ಕೆ ಏರಿಕೆಯಾಗಿದೆ. ಇಂದು 309 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದು, ಇದುವರೆಗೆ ಒಟ್ಟು 2,762 ಮಂದಿ ಬಿಡುಗಡೆಯಾಗಿದ್ದಾರೆ. 1,682 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 127 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:

  • ಆಲೂರು - 119
  • ಅರಕಲಗೂಡು - 395
  • ಅರಸೀಕೆರೆ - 684
  • ಬೇಲೂರು - 314
  • ಚನ್ನರಾಯಪಟ್ಟಣ - 672
  • ಹಾಸನ 1793.
  • ಹೊಳೆನರಸೀಪುರ 436
  • ಸಕಲೇಶಪುರ 131
  • ಇತರ 27 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 4,571 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ABOUT THE AUTHOR

...view details