ಕರ್ನಾಟಕ

karnataka

ಹಾಸನದಲ್ಲಿಂದು 150 ಹೊಸ ಕೋವಿಡ್​ ಪ್ರಕರಣ; 920 ಮಂದಿ ಡಿಸ್ಚಾರ್ಜ್​

By

Published : Sep 19, 2020, 6:58 PM IST

ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 150 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 13,208 ಕ್ಕೆ ಏರಿಕೆಯಾಗಿದೆ. ಇಂದು ಬಿಡುಗಡೆಯಾದ 920 ಜನರು ಸೇರಿ ಈವರೆಗೆ 10,314 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

Hassan
Hassan

ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 150 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 13,208 ಕ್ಕೆ ಏರಿಕೆಯಾಗಿದೆ. 2 ಸಾವಿನೊಂದಿಗೆ ಮೃತರ ಸಂಖ್ಯೆ 260ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಕೊರೊನಾ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ

ಈ ಬಗ್ಗೆ ಮಾಹಿತಿ ನೀಡಿದ ಅವರು, ಇಂದು ಬಿಡುಗಡೆಯಾದ 920 ಜನರು ಸೇರಿ ಈವರೆಗೆ 10,314 ಮಂದಿ ಗುಣಮುಖರಾಗಿದ್ದಾರೆ. 2,634 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 55 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-3, ಅರಕಲಗೂಡು-32, ಅರಸೀಕೆರೆ-4, ಬೇಲೂರು-7, ಚನ್ನರಾಯಪಟ್ಟಣ-25, ಹಾಸನ-61, ಹೊಳೆನರಸೀಪುರ-12, ಸಕಲೇಶಪುರ-5, ಇತರೆ- 1 ಸೇರಿ ಒಟ್ಟು 150 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಸೇರಿ ಇತರೆ ಆರೋಗ್ಯ ಸಂಸ್ಥೆಗಳು ಕಾಣಿಸಿಕೊಂಡರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 450
2. ಅರಕಲಗೂಡು - 1234
3. ಅರಸೀಕೆರೆ - 1695
4. ಬೇಲೂರು - 969
5. ಚನ್ನರಾಯಪಟ್ಟಣ - 1690
7. ಹಾಸನ - 5636
8. ಹೊಳೆನರಸೀಪುರ - 994
9. ಸಕಲೇಶಪುರ - 460
10. ಇತರ 80 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 13,208 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details