ಕರ್ನಾಟಕ

karnataka

ಹಾಸನದಲ್ಲಿ ಇಂದು 165 ಸೋಂಕಿತರು, 7 ಮಂದಿ ಸಾವು

By

Published : Aug 9, 2020, 5:06 PM IST

ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗೆ ಎಲ್ಲರೂ ಸಹಕರಿಸಬೇಕೆಂದು ಮನವಿ..

Hassan
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಹಾಸನ :ಜಿಲ್ಲೆಯಲ್ಲಿ‌ ಇಂದು 165 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 7 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಭಾನುವಾರ ಆಲೂರು-4, ಬೇಲೂರು-25, ಹಾಸನ-85, ಅರಸೀಕೆರೆ-23, ಚನ್ನರಾಯಪಟ್ಟಣ-7, ಅರಕಲಗೂಡು-5, ಹೊಳೆನರಸೀಪುರ-9, ಸಕಲೇಶಪುರ-5, ಇತರೆ 2 ಒಟ್ಟು 165 ಪಾಸಿಟಿವ್ ಪ್ರಕರಣ ದಾಖಲಾಗಿವೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 3,459ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್

ಇಂದು 68 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಈವರೆಗೆ 1,316 ಮಂದಿ ಬಿಡುಗಡೆಯಾಗಿದ್ದಾರೆ. 2,042 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 101 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೊಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲೂಕುವಾರು ಕೋವಿಡ್ ಪ್ರಕರಣ:
1. ಆಲೂರು - 105
2. ಅರಕಲಗೂಡು- 253
3. ಅರಸೀಕೆರೆ- 489
4. ಬೇಲೂರು- 221
5. ಚನ್ನರಾಯಪಟ್ಟಣ- 514
6. ಹಾಸನ- 1428
7. ಹೊಳೆನರಸೀಪುರ- 317
8. ಸಕಲೇಶಪುರ- 113

ಇತರ 19 ಪ್ರಕರಣ ಈವರೆಗೆ ವರದಿಯಾಗಿವೆ. ಒಟ್ಟು 3,459 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ABOUT THE AUTHOR

...view details