ಹಾಸನ:ಜಿಲ್ಲೆಯಲ್ಲಿ ಹೊಸದಾಗಿ ಬುಧವಾರ 153 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 6,531ಕ್ಕೆ ಏರಿಕೆಯಾಗಿದೆ. ಐವರ ಸಾವಿನೊಂದಿಗೆ ಮೃತರ ಸಂಖ್ಯೆ 172 ತಲುಪಿದೆ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 141 ಜನರು ಸೇರಿ ಈವರೆಗೆ 4,382 ಮಂದಿ ಗುಣಮುಖರಾಗಿದ್ದಾರೆ. 1,977 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಇತರೆ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 59 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-11, ಅರಕಲಗೂಡು-14, ಅರಸೀಕೆರೆ-4, ಬೇಲೂರು-26, ಚನ್ನರಾಯಪಟ್ಟಣ-21, ಹಾಸನ-58, ಹೊಳೆನರಸೀಪುರ-16, ಸಕಲೇಶಪುರ-03, ಇತರೆ- 0 ಒಟ್ಟು 153 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಂತಾನೋತ್ಪತ್ತಿ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಡಾ. ಕಾಂತರಾಜ್ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೊಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ತಾಲೂಕುವಾರು ಕೋವಿಡ್ ಪ್ರಕರಣಗಳು:
- ಆಲೂರು - 192.
- ಅರಕಲಗೂಡು 559.
- ಅರಸೀಕೆರೆ 959.
- ಬೆಲೂರು 510.
- ಚನ್ನರಾಯಪಟ್ಟಣ 888.
- ಹಾಸನ 2629.
- ಹೊಳೆನರಸೀಪುರದಲ್ಲಿ 598.
- ಸಕಲೇಶಪುರ 182.
- ಇತರೆ 44 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 6,531 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಡಾ. ಕಾಂತರಾಜ್ ತಿಳಿಸಿದ್ದಾರೆ.