ಕರ್ನಾಟಕ

karnataka

ETV Bharat / state

ಹಾಸನದಲ್ಲಿ 178 ಕೋವಿಡ್‌ ಪ್ರಕರಣ ಪತ್ತೆ

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು ಎಂದು ಆರೋಗ್ಯಾಧಿಕಾರಿ ಸತೀಶ್ ಮನವಿ ಮಾಡಿದ್ದಾರೆ.

dho satish
ಹಾಸನ ಜಿಲ್ಲೆಯಲ್ಲಿಂದು 178 ಕೋವಿಡ್‌ ಪ್ರಕರಣ ಪತ್ತೆ: ಡಿಹೆಚ್​ಒ ಸತೀಶ್

By

Published : Oct 31, 2020, 2:19 PM IST

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 178 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 24,889 ಕ್ಕೆ ಏರಿಕೆಯಾಗಿದೆ. 3 ಸಾವಿನೊಂದಿಗೆ ಮೃತರ ಸಂಖ್ಯೆ 425 ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿಂದು 178 ಕೋವಿಡ್‌ ಪ್ರಕರಣ ಪತ್ತೆ: ಡಿಹೆಚ್​ಒ ಸತೀಶ್

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 137 ಜನರು ಸೇರಿ ಈವರೆಗೆ 23,348 ಮಂದಿ ಗುಣಮುಖರಾಗಿದ್ದಾರೆ. 1,116 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 40 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ತಾಲೂಕುವಾರು ಪ್ರಕರಣ:

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-0, ಅರಕಲಗೂಡು-9, ಅರಸೀಕೆರೆ-27, ಬೇಲೂರು-20, ಚನ್ನರಾಯಪಟ್ಟಣ-41, ಹಾಸನ-64, ಹೊಳೆನರಸೀಪುರ-15, ಸಕಲೇಶಪುರ-2, ಇತರೆ- 0 ಒಟ್ಟು 178 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

ಆರೋಗ್ಯಾಧಿಕಾರಿ ಮನವಿ:

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ. ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ABOUT THE AUTHOR

...view details