ಹಾಸನ:ಜಿಲ್ಲೆಯಲ್ಲಿಂದು ಹೊಸದಾಗಿ 18 ಕೊರೊನಾ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. 192 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಹಾಗೂ 78 ಮಂದಿ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಹಾಸನದಲ್ಲಿ ಕೊರೊನಾ ಹಾಹಾಕಾರ: 18 ಜನರಿಗೆ ವಕ್ಕರಿಸಿದ ಸೋಂಕು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದವರನ್ನು 7 ದಿನಗಳ ನಂತರ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ ಪಾಸಿಟಿವ್ ವರದಿ ಬಂದರೆ ಅವರನ್ನು ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತದೆ ನೆಗೆಟಿವ್ ಬಂದವರನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.
ಹೊಸದಾಗಿ ಬಂದ 18 ಪ್ರಕರಣಗಳಲ್ಲಿ 4 ಮಂದಿ ಹಾಸನ ಜಿಲ್ಲೆಗೆ ಸೇರಿದವರಾಗಿದ್ದಾರೆ. ಇನ್ನುಳಿದ 14 ಮಂದಿ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದವರಾಗಿದ್ದು, ಅವರಲ್ಲಿ ಒಬ್ಬರು ಶ್ವಾಸಕೋಶದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದವರು ಹಾಗೂ ಇನ್ನುಳಿದ ಎಲ್ಲರೂ ಮುಂಬೈನಿಂದ ಬಂದ ಹಿನ್ನೆಲೆ ಹೊಂದಿರುವವರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ವ್ಯಕ್ತಿಯೊಬ್ಬರಲ್ಲಿ ಇಂದು ಸೋಂಕು ಪತ್ತೆಯಾಗಿದ್ದು, ಜಿಲ್ಲಾಡಳಿತ ಹಾಗೂ ಹಿಮ್ಸ್ ವೈದ್ಯರಿಗೆ ತಲೆನೋವಾಗಿ ಪರಿಣಮಿಸಿದೆ.
ಉಸಿರಾಟದ ತೊಂದರೆ ಎಂದು ಜೂನ್ 10ರಂದು ಈ ವೃದ್ಧ ಹಿಮ್ಸ್ಗೆ ದಾಖಲಾಗಿದ್ದರು. ಇದರ ಪರಿಣಾಮವಾಗಿ ಇದೀಗ ಆತನಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಹಾಗೂ ಸಿಬ್ಬಂದಿ ಸೇರಿ ಒಟ್ಟು 17 ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇವರೆಲ್ಲರ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಈ ರೋಗಿ ಚನ್ನರಾಯಪಟ್ಟಣದ ಗ್ರಾಮವೊಂದರ ನಿವಾಸಿಯಾಗಿರುವ ಕಾರಣ, ಆ ಗ್ರಾಮವನ್ನೂ ಇದೀಗ ಸೀಲ್ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಜೊತೆಗೆ ವೃದ್ಧನ ಪ್ರಯಾಣದ ವಿವರ ಸಿಗದಿರುವುದೂ ಸಹ ವೈದ್ಯರಿಗೆ ತಲೆನೋವು ಉಂಟು ಮಾಡಿದೆ.