ಹಾಸನ:ಜಿಲ್ಲೆಯಲ್ಲಿ ಇಂದು ಹೊಸದಾಗಿ 192 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 22,705ಕ್ಕೆ ಏರಿಕೆಯಾಗಿದೆ. ಇವತ್ತು ಸಂಭವಿಸಿದ ಒಬ್ಬ ವ್ಯಕ್ತಿಯ ಸಾವಿನೊಂದಿಗೆ ಮೃತರ ಸಂಖ್ಯೆ 389ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಇಂದು ಬಿಡುಗಡೆಯಾದ 227 ಜನರು ಸೇರಿ ಈವರೆಗೆ 18,802 ಮಂದಿ ಸೋಂಕಿಂದ ಗುಣಮುಖರಾಗಿದ್ದಾರೆ. ಇನ್ನೂ 3,514 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 55 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯಾಧಿಕಾರಿ ಡಾ. ಸತೀಶ್ ತಾಲೂಕುವಾರು ಪ್ರಕರಣ:
ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-2, ಅರಕಲಗೂಡು-26, ಅರಸೀಕೆರೆ-3, ಬೇಲೂರು-35, ಚನ್ನರಾಯಪಟ್ಟಣ-11, ಹಾಸನ-103, ಹೊಳೆನರಸೀಪುರ-5, ಸಕಲೇಶಪುರ-6, ಇತರೆ- 1 ಒಟ್ಟು 192 ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಆರೋಗ್ಯಧಿಕಾರಿ ಮನವಿ :
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.