ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಕೋವಿಡ್​ಗೆ ಮತ್ತಿಬ್ಬರು ಬಲಿ; 21 ಹೊಸ ಪ್ರಕರಣ - Health and Family Welfare Officer Satish Hassan

ಹಾಸನದಲ್ಲಿ ಮತ್ತೆ ಕೋವಿಡ್​ನಿಂದ 2 ಸಾವು ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

Hassan
ಡಾ. ಸತೀಶ್

By

Published : Jul 9, 2020, 11:42 PM IST

ಹಾಸನ: ಜಿಲ್ಲೆಯಲ್ಲಿ ಮತ್ತೆ ಕೋವಿಡ್​ನಿಂದ 2 ಸಾವು ಸಂಭವಿಸಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ಹೊಸದಾಗಿ 21 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 615 ಕ್ಕೆ ಏರಿಕೆಯಾಗಿದೆ. ಈವರೆಗೆ 390 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 210 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 15 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್

ಇಂದು ಪತ್ತೆಯಾದ 21 ಪ್ರಕರಣಗಳಲ್ಲಿ 4 ಜನ ಆಲೂರು ತಾಲ್ಲೂಕಿನವರು, 6 ಮಂದಿ ಹಾಸನ ತಾಲ್ಲೂಕಿನವರು, 6 ಜನ ಚನ್ನರಾಯಪಟ್ಟಣ ತಾಲ್ಲೂಕಿನವರಾಗಿದ್ದಾರೆ. ಬೇಲೂರು ತಾಲೂಕಿನಲ್ಲಿ ಒಬ್ಬರು, ಹೊಳೆನರಸೀಪುರ ತಾಲೂಕಿನಲ್ಲಿ 3 ಮಂದಿ ಹಾಗೂ ಒಬ್ಬರು ಅರಸೀಕೆರೆ ತಾಲೂಕಿನವರಾಗಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details