ಹಾಸನದಲ್ಲಿ ಇಂದು ಮತ್ತೆ 28 ಕೊರೊನಾ ಪ್ರಕರಣ ಪತ್ತೆ
ಜಿಲ್ಲೆಯಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ವತಃ ತಾವೇ ಬೇರೆಯವರಿಂದ ದೂರವಿದ್ದು ಕೊರೊನಾ ತಡೆಯುವಲ್ಲಿ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಮನವಿ ಮಾಡಿದ್ದಾರೆ.
ಹಾಸನ:ಜಿಲ್ಲೆಯಲ್ಲಿ ಹೊಸದಾಗಿ 28 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 426ಕ್ಕೆ ಏರಿಕೆಯಾಗಿದೆ. 246 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 176 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 4 ಮಂದಿ ವೈರಸ್ನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಅರಸೀಕೆರೆ ತಾಲೂಕಿನಲ್ಲಿ 14, ಚನ್ನರಾಯಪಟ್ಟಣ ತಾಲೂಕಿನಲ್ಲಿ ಒಬ್ಬರು, ಆಲೂರು ತಾಲೂಕಿನ ಇಬ್ಬರು, ಹಾಸನ ತಾಲೂಕಿನ 6 ಮಂದಿ, ಹೊಳೆನರಸೀಪುರ ತಾಲೂಕಿನ 4 ಜನ ಹಾಗೂ ಸಕಲೇಶಪುರ ತಾಲೂಕಿನ ಒಬ್ಬರು ಸೇರಿದಂತೆ ಒಟ್ಟು 28 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಮಾಹಿತಿ ನೀಡಿದರು.
ಅರಕಲಗೂಡು - 19
ಆಲೂರು - 20
ಬೇಲೂರು - 9
ಚನ್ನರಾಯಪಟ್ಟಣ - 208
ಹೊಳೆನರಸೀಪುರ - 69
ಹಾಸನ - 53
ಸಕಲೇಶಪುರ - 01
ಇತರೆ ಜಿಲ್ಲೆ - 04