ಕರ್ನಾಟಕ

karnataka

ETV Bharat / state

ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಮೂವರ ದುರ್ಮರಣ - lorry accident

ಕೆಮಿಕಲ್ ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.

3 died in lorry accident
3 died in lorry accident

By

Published : Mar 21, 2021, 11:01 AM IST

Updated : Mar 21, 2021, 11:11 AM IST

ಹಾಸನ: ರಾಸಾಯನಿಕ ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಅರಕಲಗೂಡು ತಾಲೂಕಿನ ಬಸವನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಪ್ರಮೋದ್ (45), ಪರಮೇಶ್ (40) ಸ್ಥಳದಲ್ಲೇ ಮೃತ ಪಟ್ಟಿದ್ದು, ಚಾಲಕ ಪುಟ್ಟರಾಜು (42) ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೈಸೂರಿನ ರಿಲಯನ್ಸ್ ಕಂಪನಿಯಿಂದ ಹಾಸನದ ಹಿಮತ್ ಸಿಂಗ್ ಕಂಪನಿಗೆ ಕೆಮಿಕಲ್ ಸಾಗಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.

ಅರಕಲಗೂಡು ತಾಲೂಕಿನ ಬಸವನಹಳ್ಳಿ ಸಮೀಪ ನಿನ್ನೆ ರಾತ್ರಿ ಸುಮಾರು 10-30ಕ್ಕೆ ಕೆಮಿಕಲ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಗ್ರಾಮಸ್ಥರು ಅಗ್ನಿ ಶಾಮಕ ದಳಕ್ಕೆ ವಿಷಯ ತಿಳಿಸಿ, ಬೆಂಕಿ ನಂದಿಸಿದ್ದಾರೆ.

ಈ ಕುರಿತು ಸ್ಥಳಕ್ಕೆ ಅರಕಲಗೂಡು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Last Updated : Mar 21, 2021, 11:11 AM IST

ABOUT THE AUTHOR

...view details