ಹಾಸನ:ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.
ಮನೆ ಬಾಗಿಲು ಮುರಿದು ಕಳ್ಳತನ: 390 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ದೋಚಿ ಪರಾರಿ - hassan crime news
ಹಾಸನ ಜಿಲ್ಲೆಯಲ್ಲಿ ಹೇಮಾವತಿ ನಗರದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಹಿಂಬಾಗಿಲು ಮುರಿದು ಒಳ ನುಗ್ಗಿ 11.5 ಲಕ್ಷ ಮೌಲ್ಯದ 390 ಗ್ರಾಂ ಚಿನ್ನ, 1 ಲಕ್ಷ ಮೌಲ್ಯದ 2 ಕೆಜಿ ಬೆಳ್ಳಿ ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಮನೆ ಬಾಗಿಲು ಮುರಿದು ಕಳ್ಳತನ
ಹೇಮಾವತಿ ನಗರದಲ್ಲಿ ಸುಜಾತ - ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು,11.5 ಲಕ್ಷ ಮೌಲ್ಯದ 390 ಗ್ರಾಂ ಚಿನ್ನ, 1 ಲಕ್ಷ ಮೌಲ್ಯದ 2 ಕೆಜಿ ಬೆಳ್ಳಿ ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಕಳ್ಳತನವಾದ ಮನೆಯ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಭೇಟಿ ಪರಿಶೀಲನೆ ನಡೆಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.