ಹಾಸನ:ನಗರದ ಹೊರವಲಯದ ಕೆಂಚಟ್ಟಳ್ಳಿ ಬಳಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಟಾಟಾ ಸುಮೋಗೆ ಹಿಂಬದಿಯಿಂದ ಕ್ವಾಲಿಸ್ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ನಾಲ್ವರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನವರು ಎಂದು ಗುರುತಿಸಲಾಗಿದೆ. ಮೃತರನ್ನು ಸುನಿಲ್ ಕುಮಾರ್ (25) ಪ್ರದೀಪ್ ಕುಮಾರ್ (26) ನವೀನ್ ಕುಮಾರ್ (25) ಮತ್ತು ಚಂದ್ರಶೇಖರ್ (26) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.