ಹಾಸನ :ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಹೊಸದಾಗಿ 439 ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಹೇಳಿದರು.
ಕೊರೊನಾ ಪ್ರಕರಣಗಳ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ 19,880 ಪ್ರಕರಣಗಳು ದಾಖಲಾಗಿದ್ದು,15,445 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 4,069 ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟ ವರದಿ ಬಂದಿದ್ದು ಇದರೊಂದಿಗೆ ಜಿಲ್ಲೆಯಲ್ಲಿನ ಸಾವಿನ ಸಂಖ್ಯೆ 366ಕ್ಕೆ ಏರಿದೆ. ತೀವ್ರ ನಿಗಾ ಘಟಕದಲ್ಲಿ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.