ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 99 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 24,248 ಕ್ಕೆ ಏರಿಕೆಯಾಗಿದೆ. ಇಬ್ಬರ ಸಾವಿನೊಂದಿಗೆ ಮೃತರ ಸಂಖ್ಯೆ 417ಕ್ಕೆ ತಲುಪಿದೆ ಎಂದು ಆರೋಗ್ಯಾಧಿಕಾರಿ ಸತೀಶ್ ಮಾಹಿತಿ ನೀಡಿದ್ದಾರೆ.
ಆರೋಗ್ಯಾಧಿಕಾರಿ ಡಾ. ಸತೀಶ್ ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 192 ಜನರು ಸೇರಿ ಈವರೆಗೆ 22,357 ಮಂದಿ ಗುಣಮುಖರಾಗಿದ್ದಾರೆ. 1,474 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 41 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ತಾಲೂಕುವಾರು ಪ್ರಕರಣ:ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-1, ಅರಕಲಗೂಡು-4, ಅರಸೀಕೆರೆ-3, ಬೇಲೂರು-5, ಚನ್ನರಾಯಪಟ್ಟಣ-9, ಹಾಸನ-58, ಹೊಳೆನರಸೀಪುರ-4, ಸಕಲೇಶಪುರ-15, ಇತರೆ- 0 ಒಟ್ಟು 99 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಆರೋಗ್ಯಾಧಿಕಾರಿ ಮನವಿ: ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು. ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.