ಲಾರಿ-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - ಹಾಸನ
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ಹಾಸನ
ಹಾಸನ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೊಸೂರು ಗ್ರಾಮದ ದೇವರಾಜ್ ಮೃತ ದುರ್ದೈವಿಯಾಗಿದ್ದು, ಬಾಚನಹಳ್ಳಿ ಸಮೀಪದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸ್ವಗ್ರಾಮಕ್ಕೆ ಹಿಂತಿರುಗುವಾಗ ವೇಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ದೇವರಾಜ್ ಮೃತಪಟ್ಟಿದ್ದಾರೆ.