ಹಾಸನ:ನಗರದ ಸಮೀಪ ಬೆಂಗಳೂರು ರಸ್ತೆಯಲ್ಲಿರುವ ಗವೇನಹಳ್ಳಿ ಕೆರೆಯಲ್ಲಿ ಶನಿವಾರ ಬೆಳಿಗ್ಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ.
ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ - ಗವೇನಹಳ್ಳಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ
ಹಾಸನ ನಗರದ ಸಮೀಪ ಬೆಂಗಳೂರು ರಸ್ತೆಯಲ್ಲಿರುವ ಗವೇನಹಳ್ಳಿ ಕೆರೆಯಲ್ಲಿ ಶನಿವಾರ ಬೆಳಿಗ್ಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸದ್ಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೆರೆಯಲ್ಲಿ ವ್ಯಕ್ತಿಯ ಶವ ತೇಲುತ್ತಿದ್ದಿದ್ದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಅನಂತರ ಸ್ಥಳಕ್ಕಾಗಮಿಸಿದ ಬಡಾವಣೆ ಪೊಲೀಸರು ಮೃತ ದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ರು. ಮೃತ ವ್ಯಕ್ತಿಗೆ ಸುಮಾರು 58 ವರ್ಷ ವಯಸ್ಸಾಗಿರಬಹುದೆಂದು ಊಹಿಸಿದ್ದು, ಆತ ಯಾವ ರೀತಿ ಸಾವನ್ನಪ್ಪಿದ್ದಾರೆಂಬುದು ಇನ್ನೂ ತಿಳಿದುಬಂದಿಲ್ಲ.
ಯಾರಾದರೂ ಕೊಲೆಗೈದು ಎಸೆದಿರಬಹುದಾ?, ಕೆರೆ ಬಳಿ ಹೋಗಿದ್ದಾಗ ಕಾಲು ಜಾರಿ ಬಿದ್ದಿರಬಹುದಾ? ಅಥವಾ ಆತ್ಮಹತ್ಯೆಗೆ ಶರಣಾಗಿದ್ದಾರಾ? ಎಂಬ ಅನುಮಾನಗಳು ಮೂಡಿದ್ದು, ಶವ ಪರೀಕ್ಷೆ ನಂತರ ಮತ್ತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.