ಸಕಲೇಶಪುರ: ಸಾಲಬಾಧೆ ತಾಳದೆ ರೈತನೋರ್ವ ತನ್ನ ಜಮೀನಿನಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾದ ರೈತ - ಸಾಲಬಾಧೆ ತಾಳದೆ ನೇಣಿಗೆ ಶರಣಾದ ರೈತ
ಸಕಲೇಶಪುರ ತಾಲೂಕಿನ ಯಡೇಹಳ್ಳಿ ಗ್ರಾಮದ ರೈತನೋರ್ವ ಸಾಲಬಾಧೆ ತಾಳದೆ ತನ್ನ ಜಮೀನಿನಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
Died
ಗ್ರಾಮದ ವೈ. ಎಸ್ ಕುಮಾರ್ (42) ಆತ್ಮಹತ್ಯೆಗೆ ಶರಣಾದ ರೈತ. ಈತ ತನ್ನ ತಾಯಿಯ ಹೆಸರಿನಲ್ಲಿ ಇದ್ದ ಎರಡು ಎಕರೆ ಜಮೀನಿನಲ್ಲಿ ಶುಂಠಿ ಬೆಳೆದಿದ್ದನು. ಜೊತೆಗೆ ಕೃಷಿಗೆಂದು ವಿಪರೀತ ಕೈ ಸಾಲ ಮಾಡಿಕೊಂಡಿದ್ದನು. ಹಣ ನೀಡುವಂತೆ ಸಾಲ ಕೊಟ್ಟವರು ಸೂಚಿಸಿದ್ದಕ್ಕೆ ಇಂದು ಬೆಳಗ್ಗೆ ತನ್ನ ಜಮೀನಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡಿದ್ದಾರೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.