ಹಾಸನ: ಕೌಟುಂಬಿಕ ಕಲಹ ದಾರುಣ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.
ಲತಾ (33) ಬರ್ಬರವಾಗಿ ಕೊಲೆಯಾದವಳು. ಪತಿ ಸಂತೋಷ್ (38) ಕೊಲೆ ಮಾಡಿದ ಆರೋಪಿ. ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಸುಂಕದಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮದ್ಯವ್ಯಸನಿಯಾಗಿದ್ದ ಸಂತೋಷ್ ದುಡಿದ ಹಣವನ್ನೆಲ್ಲ ಕುಡಿತಕ್ಕೆಂದು ಖರ್ಚುಮಾಡುತ್ತಿದ್ದ. ನಿನ್ನೆ ಕೂಡಾ ಪಾನಮತ್ತನಾಗಿ ಬಂದು ಹೆಂಡತಿಯೊಡನೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.
ಆರೋಪಿ ಸಂತೋಷ್ ನನ್ನು ಸ್ಥಳೀಯರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಣಾವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.