ಹಾಸನ:ಕ್ಷುಲ್ಲಕ ಕಾರಣಕ್ಕೆ ಗಂಡನೇ ಹೆಂಡತಿಯನ್ನು ಕೊಲೆಗೈದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತಾಲೂಕಿನ ಶಾಂತಿಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಂಡ ತನ್ನ ಮಡದಿ ಅನ್ನಪೂರ್ಣ(30)ಳನ್ನ ಕೊಲೆ ಮಾಡಿದ್ದಾನೆ. ಕೊಲೆಗೆ ಕೌಟುಂಬಿಕ ಸಮಸ್ಯೆಯೇ ಕಾರಣ ಎಂಬ ಮಾತು ಕೇಳಿ ಬಂದಿದ್ದು, ಬಳಿಕ ತಾನೂ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡವನನ್ನು ತುಳಸಿದಾಸ್ (40) ಎಂದು ಗುರುತಿಸಲಾಗಿದೆ. ಈತ ಹಾಸನದ ಎಟಿಎಂ ಒಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ. ಇಂದು ಮಧ್ಯಾಹ್ನ ತುಳಿಸಿದಾಸ್ ತನ್ನ ಪತ್ನಿಯನ್ನ ಜಮೀನಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಇಬ್ಬರಿಗೂ ಸ್ವಲ್ಪ ಹೊತ್ತು ಜಗಳವಾಗಿದೆ. ಬಳಿಕ ಆತ ಆಕೆಯನ್ನ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.