ಹಾಸನ:ಮರ ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕಡಗರ್ಜೆಯ ಗ್ರಾಮದಲ್ಲಿ ಘಟನೆ ನಡೆದಿದೆ.
ಮರ ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು - hassan labour died
ಮರ ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಡಗರ್ಜೆಯ ಗ್ರಾಮದಲ್ಲಿ ಘಟನೆ ನಡೆದಿದೆ.
ಚಿಕ್ಕಮಗಳೂರು ಮೂಲದ ಪಾಲಾಕ್ಷ (26) ಸಾವಿಗೀಡಾದ ಕಾರ್ಮಿಕ. ಕಡೆಗರ್ಜೆಯ ವಿಕ್ರಂಗೌಡ ಎಂಬವರ ತೋಟದಲ್ಲಿ ಕೂಲಿ ಕೆಲಸ ಮಾಡಲು ಬಂದಿದ್ದ ಈತ ಕಬ್ಬಿಣದ ಏಣಿ ಏರಿ ಮರ ಕಡಿಯಲು ಮುಂದಾಗಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಏಣಿ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇಲಾಖೆಯ ಕಡೆಯಿಂದ ಯಾವುದೇ ನಿರ್ಲಕ್ಷ್ಯವಾಗಿಲ್ಲ. ಮಾಲೀಕರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.