ಕೊರೊನಾ ದೃಢಪಟ್ಟ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ವೃದ್ಧ - lockdown
ಕೊರೊನಾ ದೃಢಪಟ್ಟ ಬೆನ್ನಲ್ಲೇ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಹಾಸನ/ಚನ್ನರಾಯಪಟ್ಟಣ:ಕೊರೊನಾ ಸೋಂಕು ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನುಗ್ಗೆಹಳ್ಳಿ ಹೋಬಳಿಯ ಹೆಬ್ಬಳಲು ಗ್ರಾಮದ ನಂಜಯ್ಯ (65) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ನಾಲ್ಕು ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದಾಗ ಕೋವಿಡ್ ಧೃಡಪಟ್ಟಿದೆ. ಬಳಿಕ ಮನನೊಂದು ಗುರುವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಸ್ಥಳಕ್ಕೆ ನುಗ್ಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನುಗ್ಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚುತ್ತಿದೆ.