ಹುಟ್ಟುಹಬ್ಬಕ್ಕೆ ಶುಭ ಕೋರಿರುವ ಬ್ಯಾನರ್‌ನಲ್ಲಿ ಸಿದ್ದು ಫೋಟೋ: ಮತ್ತೆ 'ಕೈ' ಹಿಡಿತಾರಾ ಎ.ಮಂಜು? - A Manju photo with Siddhu return go to congress
ಹಾಸನ ಲೋಕಸಭಾ ಚುನಾವಣೆಯ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹುಟ್ಟುಹಬ್ಬದ ಬ್ಯಾನರ್‌ನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾವಚಿತ್ರ ಹಾಕಿ ಶುಭ ಕೋರಲಾಗಿದ್ದು, ಎ.ಮಂಜು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವರೇ ಎಂಬ ಅನುಮಾನ ಮೂಡಿಸಿದೆ.
ಹಾಸನ:ಲೋಕಸಭಾ ಚುನಾವಣೆಯ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹುಟ್ಟುಹಬ್ಬದ ಬ್ಯಾನರ್‌ನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾವಚಿತ್ರ ಹಾಕಿ ಶುಭ ಕೋರಲಾಗಿದ್ದು, ಎ.ಮಂಜು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವರೇ ಎಂಬ ಅನುಮಾನ ಮೂಡಿಸಿದೆ.
ನವೆಂಬರ್ 1ರಂದು ಎ.ಮಂಜು ಹುಟ್ಟುಹಬ್ಬ. ಹೀಗಾಗಿ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಅಭಿಮಾನಿಗಳು ಕರ್ನಾಟಕ ರಾಜ್ಯೋತ್ಸವ ಹಾಗೂ ಎ.ಮಂಜು ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿ ಬೃಹತ್ ಬ್ಯಾನರ್ ಹಾಕಿದ್ದಾರೆ. ಈ ಬ್ಯಾನರ್ ಭಾರೀ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‍ನಿಂದ ಹೊರ ಬಂದಿದ್ದ ಎ.ಮಂಜು, ಹಾಸನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ ಈಗ ಅವರ ಹುಟ್ಟುಹಬ್ಬದ ಬ್ಯಾನರ್‌ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದೆ.
ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಎ.ಮಂಜು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಎ.ಮಂಜು ಬಿಜೆಪಿಯಿಂದ ಹೊರ ಬಂದು ಮತ್ತೆ ಕಾಂಗ್ರೆಸ್ ಮನೆ ಸೇರುತ್ತಾರಾ? ಹಾಸನ ಜಿಲ್ಲೆಯಲ್ಲಿ ಅಸ್ತಿತ್ವ ಸಾಧಿಸಲು ಮುಂದಾಗಿದ್ದ ಬಿಜೆಪಿಗೆ ಹಿನ್ನಡೆಯಾಗುತ್ತಾ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.