ಹಾಸನ: ಕೌಟುಂಬಿಕ ಕಲಹದಿಂದ ಬೆಸತ್ತು ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಕಲೇಶಪುರ ಬಸ್ ನಿಲ್ದಾಣದ ಶೌಚಾಲಯದಲ್ಲಿ ನಡೆದಿದೆ.
ಸಾರ್ವಜನಿಕ ಶೌಚಾಲಯದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ - undefined
ಕೌಟುಂಬಿಕ ಕಲಹದಿಂದ ಬೆಸತ್ತು ಮಹಿಳೆಯೊಬ್ಬಳು ಸಾರ್ವಜನಿಕ ಶೌಚಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಸಿದ್ದಾಳೆ.
ಕೌಟುಂಬಿಕ ಕಲಹದಿಂದ ಬೆಸೆತ್ತಿದ್ದ ಮಹಿಳೆ ಆಟೋದಲ್ಲಿ ಬಂದು, ಚಾಲಕನ ಜೋತೆ ಸ್ವಲ್ಪ ಹೊತ್ತು ಮಾತನಾಡಿ ನಂತರ ನೇರವಾಗಿ ಸಕಲೇಶಪುರ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ನಂತರ ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಕ್ರಿಮಿನಾಶಕವನ್ನು ತೆಗೆದುಕೊಂಡು ಹೋಗಿ ಶೌಚಾಲಯದೊಳಗೆ ಕುಡಿದು ಅಸ್ವಸ್ಥಳಾಗಿ ಕೆಳಗೆ ಬಿದ್ದಿದ್ದಾಳೆ.
ಅಸ್ವಸ್ಥಳಾಗಿದ್ದ ಮಹಿಳೆಯನ್ನ ತಕ್ಷಣ ಸ್ಥಳೀಯರು ಮತ್ತು ಬಸ್ ನಿಲ್ದಾಣದ ಮೇಲ್ವಿಚಾರಕರು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸಕಲೇಶಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.