ಹಾಸನ: ಎನ್ಎಸ್ಯುಐ ತಂಡದಿಂದ ಸಂಗ್ರಹಿಸಲಾದ ಸುಮಾರು 3 ಲಕ್ಷ ರೂ. ಮೌಲ್ಯದ ದಿನಬಳಕೆ ವಸ್ತುಗಳನ್ನು ಪ್ರವಾಹ ಸಂತ್ರಸ್ತರಿಗೆ ನೀಡಲಾಯಿತು. ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
ಎನ್ಎಸ್ಯುಐಯಿಂದ ಮೂಡಿಗೆರೆ ನೆರೆ ಸಂತ್ರಸ್ತರಿಗೆ ದಿನ ಬಳಕೆ ವಸ್ತುಗಳ ವಿತರಣೆ - ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ಎನ್ಎಸ್ಯುಐ ತಂಡದಿಂದ ಸಂಗ್ರಹಿಸಲಾದ ಸುಮಾರು 3 ಲಕ್ಷ ರೂ ಮೌಲ್ಯದ ದಿನಬಳಕೆ ವಸ್ತುಗಳನ್ನು ಪ್ರವಾಹ ಸಂತ್ರಸ್ತರಿಗೆ ನೀಡುವುದಕ್ಕೆ ವಿಧಾನಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಎನ್ಎಸ್ಯುಐ ಅಧ್ಯಕ್ಷ ರಂಜಿತ್, ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸುಮಾರು 3 ಲಕ್ಷ ರೂ. ಮೌಲ್ಯದ ಆಹಾರ ಸಾಮಗ್ರಿಗಳನ್ನು ಸಂಗ್ರಹ ಮಾಡಲಾಗಿದೆ. ಇವುಗಳನ್ನು ಮೂಡಿಗೆರೆ ತಾಲೂಕು ಸಂತ್ರಸ್ತರಿಗೆ ನೀಡಲಾಗುವುದು. 50 ಚೀಲಾ ಹೊಸ ಬಟ್ಟೆ, 6 ಕ್ವಿಂಟಾಲ್ ಅಕ್ಕಿ, 100 ಚಾಪೆ, 5 ಚೀಲ ಚಪ್ಪಲಿಗಳು, ಶಾಲಾ ಮಕ್ಕಳ ಶ್ಯೂ, ಪುಸ್ತಕಗಳು, ಬಿಸ್ಕತ್, ರಗ್ ಹಾಗೂ ದಿನಸಿ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಕಷ್ಟದಲ್ಲಿರುವವರಿಗೆ ಅವಶ್ಯಕವಾಗಿ ಬೇಕಾಗಿರುವ ವಸ್ತುಗಳನ್ನು ಕಳಿಸುತ್ತಿರುವುದಾಗಿ ತಿಳಿಸಿದರು. ಪದಾರ್ಥಗಳನ್ನು ಸಂಗ್ರಹಿಸಲು ಸಹಕಾರ ನೀಡಿದ ವಿದ್ಯಾರ್ಥಿಗಳಿಗೆ ಹಾಗೂ ವಸ್ತುಗಳನ್ನು ನೀಡಿ ಸಹಾಯ ಮಾಡಿದ ಸಾರ್ವಜನಿಕರಿಗೆ ಧನ್ಯವಾದ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಆನಂದ್, ಸದಸ್ಯ ಹೆಚ್. ಕೆ. ಮಹೇಶ್, ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ವೆಂಕಟೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.