ಹಾಸನ: ದೆಹಲಿಯಲ್ಲಿ ಇನ್ನೂ ಅನಾವರಣಗೊಳ್ಳದ ಸ್ವಾಮಿ ವಿವೇಕಾನಂದ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ಸ್ವಾಮಿ ವಿವೇಕಾನಂದ ಮೂರ್ತಿ ಭಗ್ನಗೊಳಿಸಿರುವುದನ್ನು ಖಂಡಿಸಿ ಎಬಿವಿಪಿ ಪ್ರತಿಭಟನೆ - ಹಾಸನ ಎಬಿವಿಪಿ ಪ್ರತಿಭಟನೆ
ದೆಹಲಿಯಲ್ಲಿ ಇನ್ನೂ ಅನಾವರಣಗೊಳ್ಳದ ಸ್ವಾಮಿ ವಿವೇಕಾನಂದ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ಹಾಸನದಲ್ಲಿ ಎಬಿವಿಪಿ ಪ್ರತಿಭಟನೆ
ಹಾಸನದಲ್ಲಿ ಎಬಿವಿಪಿ ಪ್ರತಿಭಟನೆ
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ತಲುಪಿ, ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಜೆ.ಎನ್.ಯು. ವಿಶ್ವವಿದ್ಯಾಲಯದಲ್ಲಿ ಇನ್ನೂ ಅನಾವರಣಗೊಳ್ಳದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಹಾಳು ಮಾಡಿರುವ ಮತ್ತು ಸಾರ್ವಜನಿಕ ಸಂಪತ್ತನ್ನು ನಾಶ ಮಾಡಿರುವುದನ್ನು ಖಂಡಿಸಿದರು. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.