ಕರ್ನಾಟಕ

karnataka

ETV Bharat / state

ಕೆಎಸ್ಆರ್​ಟಿಸಿ ಬಸ್-ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ಇಬ್ಬರ ಸಾವು - accident in hassan

ಚಿಕ್ಕಮಗಳೂರಿನಿಂದ ಬೇಲೂರು ಮಾರ್ಗವಾಗಿ ಹಾಸನ ಮೂಲಕ ಮಂಡ್ಯಕ್ಕೆ ಹೋಗುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಮತ್ತು ಹಾಸನ ಮಾರ್ಗವಾಗಿ ಬೇಲೂರಿನ ಕಡೆಗೆ ಮೀನುಗಳನ್ನು ಹೊತ್ತು ಸಾಗುತ್ತಿದ್ದ ಕಂಟೈನರ್ ಲಾರಿ ನಡುವೆ ಈ ಘಟನೆ ಸಂಭವಿಸಿದೆ.

accident between KSRTC bus-container lorry: two Death
ಕೆಎಸ್ಆರ್​ಟಿಸಿ ಬಸ್-ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ:

By

Published : Nov 15, 2020, 1:16 AM IST

ಹಾಸನ: ಕೆಎಸ್ಆರ್​ಟಿಸಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿಇಬ್ಬರು ಸಾವಿಗೀಡಾಗಿರುವ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನಿಂದ ಬೇಲೂರು ಮಾರ್ಗವಾಗಿ ಹಾಸನ ಮೂಲಕ ಮಂಡ್ಯಕ್ಕೆ ಹೋಗುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಮತ್ತು ಹಾಸನ ಮಾರ್ಗವಾಗಿ ಬೇಲೂರಿನ ಕಡೆಗೆ ಮೀನುಗಳನ್ನು ಹೊತ್ತು ಸಾಗುತ್ತಿದ್ದ ಕಂಟೈನರ್ ಲಾರಿ ನಡುವೆ ಈ ಘಟನೆ ಸಂಭವಿಸಿದೆ. ಈ ಹಿನ್ನೆಲೆ ಲಾರಿ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಲಾರಿ ಎಂಜಿನ್ ಒಳಗೆ ಸಿಲುಕಿಕೊಂಡು ಸಾವಿಗೀಡಾಗಿದ್ದಾನೆ. ಕೂದಲೆಳೆ ಅಂತರದಲ್ಲಿ ಬಸ್ ಚಾಲಕ ಪಾರಾಗಿದ್ದು, ಬಸ್ ನಲ್ಲಿದ್ದ ಹತ್ತಾರು ಮಂದಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಬೇಲೂರು ಮತ್ತು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದಲ್ಲದೆ, ಏಕಾಏಕಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್​ ಹಿಂಬದಿಯಿಂದ ಬರುತ್ತಿದ್ದ ಮಾರುತಿ ಕಾರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆ ಕಾರ್​ ಪ್ರಯಾಣಿಕರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಹೊರತೆಗೆದು, ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ABOUT THE AUTHOR

...view details