ಬೈಕ್ಗೆ ಡಿಕ್ಕಿಯೊಡೆದ ಟಿಪ್ಪರ್... ಕೂದಲೆಳೆಯಂತರದಿಂದ ಪಾರಾದ ಸವಾರ..!
ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದು ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಹಾಸನ:ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದು ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಬಶೀರ್ ಗಾಯಗೊಂಡ ದ್ವಿಚಕ್ರ ವಾಹನ ಸವಾರನಾಗಿದ್ದು, ಹಿಂಬದಿಯಿಂದ ಬಂದ ಟಿಪ್ಪರ್ ಚಾಲಕನ ನಿರ್ಲಕ್ಷದಿಂದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮುಂಬದಿಗೆ ವಾಹನ ಸಿಲುಕಿ ಕೂದಲೆಳೆಯಂತರದಿಂದ ಬಶೀರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಅಪಘಾತದಲ್ಲಿ ಕಾಲು ಮುರಿತಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇಲೂರು ಸರ್ಕಾರಿ ಆಸ್ಪತ್ರೆಗೆ ಗಾಯಾಳುವನ್ನು ದಾಖಲಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಸಂಬಂಧ ಟಿಪ್ಪರ್ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದು ಬೇಲೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.