ಕರ್ನಾಟಕ

karnataka

ETV Bharat / state

ದೇವರ ದರ್ಶನಕ್ಕೆ ಹೊರಟಿದ್ದ ಕಾರಿಗೆ ಅಪರಿಚಿತ ವಾಹನ ಡಿಕ್ಕಿ: ಒಬ್ಬನ ಸಾವು, ನಾಲ್ವರಿಗೆ ಗಂಭೀರ ಗಾಯ

ದೇವರ ದರ್ಶನಕ್ಕೆ ಹೊರಟಿದ್ದ ವೇಳೆ ಕಾರು ಅಪಘಾತ ಸಂಭವಿಸಿ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

By

Published : Jan 19, 2021, 11:39 AM IST

Hassan
ಕಾರು ಅಪಘಾತ

ಹಾಸನ: ದೇವರ ದರ್ಶನಕ್ಕೆ ಹೊರಟಿದ್ದ ವೇಳೆ ಅಪರಿಚಿತ ವಾಹನ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವಿಗೀಡಾಗಿ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ದೇವರಾಜು ಮೃತ ದುರ್ದೈವಿ. ಇನ್ನು ಮಧು ಕಿರಣ್, ಶ್ರೀನಿಧಿ, ಕೇಶವಯ್ಯ ಹಾಗೂ ನಾಗರಾಜು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯರಾತ್ರಿ ವೇಳೆ ಅಪಘಾತ ಸಂಭವಿಸಿದ್ದು, ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಕಾರಿನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಬಳಿಕ ಸ್ಥಳೀಯರು ಗಮನಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ನಾಲ್ಕು ಮಂದಿಯನ್ನ ರಕ್ಷಣೆ ಮಾಡಿದ್ದಾರೆ. ಆದರೆ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಇನ್ನು ಅಪಘಾತವೆಸಗಿದ ಬೇರೊಂದು ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details