ಹಾಸನ: ತಾಲೂಕಿನ ಚಿಕ್ಕ ಕಡಲೂರು ಗ್ರಾಮದ ಬಳಿ ಬೈಕ್ ನಿಲ್ಲಿಸಿಕೊಂಡು ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹಾಸನದಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು - Dudda police station in Hassan
ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಚಿಕ್ಕ ಕಡಲೂರು ಬಳಿ ನಡೆದಿದೆ.
ಹಾಸದದಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು
ಕವಳಿಕೆರೆ ಗ್ರಾಮದ ಕುಮಾರ್ (45) ಮೃತ ವ್ಯಕ್ತಿ. ಈತ ಕೆಲಸದ ನಿಮಿತ್ತ ರಸ್ತೆ ಬದಿ ನಿಂತಿದ್ದ ವೇಳೆ ಹಾಸನ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಮಾರ್ ಸಾವಿಗೆ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾರಣ ಎಂದು ಆರೋಪಿಸಿ ಸಂಬಧಿಕರು ಹಾಗೂ ಸ್ಥಳೀಯರು ಸ್ಥಳದಲ್ಲೇ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸರ ಮನವೊಲಿಕೆ ನಂತರ ಪ್ರತಿಭಟನೆ ಹಿಂಪಡೆದ ಸ್ಥಳೀಯರು, ಅರಸೀಕೆರೆ ತಾಲೂಕು ಬೆಳಗುಂಬಕ್ಕೆ ತೆರಳುತ್ತಿದ್ದ ಕಾರನ್ನು ಹಿಡಿದು ದುದ್ದ ಪೊಲೀಸರಿಗೆ ಒಪ್ಪಿಸಿದ್ದಾರೆ.