ಹಾಸನ/ ಹೊಳೆನರಸೀಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಗುಂಡಿಗೆ ಬಿದ್ದು ಕಾರಿನಲ್ಲಿದ್ದ ಮಗು ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು: ಐವರಿಗೆ ಗಂಭೀರ ಗಾಯ - ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಕಾರು ಉರುಳಿದ ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನದಲ್ಲಿ ಅಪಘಾತ
ಹೊಳೆನರಸೀಪುರ ತಾಲೂಕಿನ ಕಡವಿನಹೊಸಹಳ್ಳಿ ಗೇಟ್ ಬಳಿ ಆಳಕ್ಕೆ ಬಿದ್ದಿದ್ದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ನವೀನ್ ಎಂಬುವರ ಕುಟುಂಬದ ಐದು ಜನ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಳೆನರಸೀಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.