ಕರ್ನಾಟಕ

karnataka

ETV Bharat / state

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ.. ಪ್ರಾಂಶುಪಾಲ ಪೊಲೀಸರ ವಶಕ್ಕೆ - Etv Bharat Kannada

ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ - ಕಾಲೇಜು ಪ್ರವಾಸದ ವೇಳೆ ವಿದ್ಯಾರ್ಥಿನಿಯರಿಗೆ ಕಿರುಕುಳ ಆರೋಪ - ಸರ್ಕಾರಿ ಕಾಲೇಜ್ ಪ್ರಾಂಶುಪಾಲ ವಶಕ್ಕೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ

By

Published : Feb 18, 2023, 8:50 PM IST

ಹಾಸನ: ಅರಕಲಗೂಡು ತಾಲೂಕಿನ ಸರ್ಕಾರಿ ಕಾಲೇಜ್ ಒಂದರ ಪ್ರಾಂಶುಪಾಲ ಜಯರಾಮ್ ಎಂಬುವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಅರಕಲಗೂಡು ತಾಲೂಕಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಲವು ಅಪ್ರಾಪ್ತ ಬಾಲಕಿಯರಿಗೆ ಪ್ರಾಂಶುಪಾಲ ಜಯರಾಮ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಂದಾಗಿದ್ದರು ಎಂಬ ವಿಚಾರ ತಹಶೀಲ್ದಾರ್ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬಯಲಾಗಿದೆ.

ಇನ್ನು, ಪ್ರವಾಸದ ವೇಳೆ ಐದು ಮಂದಿ ಅಪ್ರಾಪ್ತ ಬಾಲಕಿಯರೊಂದಿಗೆ ಜಯರಾಮ್​ ಅನುಚಿತವಾಗಿ ವರ್ತನೆ ಮಾಡಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯೊಬ್ಬರಿಗೆ ತನ್ನ ರೂಮಿಗೆ ಬರುವಂತೆ ಪೀಡಿಸಿದ್ದಕ್ಕೆ ಆಕೆ ಇದರಿಂದ ನೊಂದು ಅಳುತ್ತ ತನ್ನ ಪೋಷಕರಿಗೆ ನಡೆದ ವಿಚಾರವನ್ನು ಹೇಳಿದ್ದಾಳೆ. ನಂತರ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ವಿದ್ಯಾರ್ಥಿನಿಯರ ಮಾಹಿತಿ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿ ಪ್ರಾಂಶುಪಾಲ ಜಯರಾಮ್​ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಲೆಂಗಿಕ ದೌರ್ಜನ್ಯ ಪ್ರಕರಣ- ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಶಾಲೆಗೆ ಹೊರಟಿದ್ದ ಬಾಲಕಿಯನ್ನು ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನ ಪೊಲೀಸರು ಬಂಧಿಸಿದ್ದರು. ಎಂಟು ವರ್ಷದ ಬಾಲಕಿ‌ ಮೇಲೆ ಎರಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಫಿರೋಜ್ ಖಾನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಪಶ್ಚಿಮ ಬಂಗಾಳ ಮೂಲದ ಬಾಲಕಿಯ ಕುಟುಂಬ 2 ವರ್ಷಗಳ ಹಿಂದೆ ಕೆಲಸವನ್ನು ಅರಸಿ ಬೆಂಗಳೂರು ನಗರಕ್ಕೆ ಬಂದು ವಾಸವಾಗಿತ್ತು.

ಇದನ್ನೂ ಓದಿ:8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಗ್ಯಾರೇಜ್ ಯುವಕನ ಬಂಧನ

ಇದನ್ನೂ ಓದಿ:ವಿಲ್ಲುಪುರಂನ ಆಶ್ರಮದಲ್ಲಿ ಅಮಾನವೀಯ ಘಟನೆ: ಮಾನಸಿಕ ಅಸ್ವಸ್ಥರಿಗೆ ಡ್ರಗ್ಸ್​ ನೀಡಿ ದೌರ್ಜನ್ಯ ಆರೋಪ

2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ ಆರೋಪಿ ಫಿರೋಜ್ ಖಾನ್ ಬಾಲಕಿಯನ್ನು ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್ ಒಳಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದ. ಇದರಿಂದ ಭಯಭೀತಳಾದ ಬಾಲಕಿ ಆರೋಪಿಯಿಂದ ತಪ್ಪಿಸಿಕೊಂಡು ಅಳುತ್ತಾ ಮನೆಗೆ ಓಡಿ ಹೋಗಿ ತಾಯಿಯ ಬಳಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಳು. ಮಗಳ ಮೇಲಾದ ದೌರ್ಜನ್ಯದ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು. ಆರೋಪಿ ಫಿರೋಜ್ ಖಾನ್​ನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:ಇನ್ಸ್ಟಾಗ್ರಾಮ್​ನಲ್ಲಿ ಉದ್ಯೋಗದ ಆಸೆ ತೋರಿಸಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ; ಟೆಕ್ಕಿ ಅರೆಸ್ಟ್‌

ABOUT THE AUTHOR

...view details