ಹಾಸನ: ದೇವಸ್ಥಾನದ ಹಣ ದುರುಪಯೋಗ ಆರೋಪದ ಕಾರಣ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಅರಸೀಕೆರೆ ತಾಲೂಕಿನ ಅಮ್ಮನಹಟ್ಟಿ ಗ್ರಾಮದಲ್ಲಿ ನಡೆದಿದೆ.
ದೇವಸ್ಥಾನದ ಹಣ ದುರುಪಯೋಗ: ಎರಡು ಗುಂಪುಗಳ ನಡ್ವೆ ನಡು ರಸ್ತೆಯಲ್ಲಿ ಮಾರಾಮಾರಿ - ದೇವಸ್ಥಾನ ಹಣ ದುರುಪಯೋಗ ಆರೋಪ
ಅರಸೀಕೆರೆ ತಾಲೂಕಿನ ಅಮ್ಮನಹಟ್ಟಿ ಗ್ರಾಮದಲ್ಲಿ ದೇವಸ್ಥಾನದ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಎರಡು ಗುಂಪುಗಳ ನಡುವೆ ಮಾರಾಮರಿ ನಡೆದಿದೆ. ಘಟನೆಯಲ್ಲಿ ಎರಡೂ ಗುಂಪಿನಿಂದ ಐವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದ ಗಂಗಾಮಾಲಿಕಾ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ಹೆಸರಿನಲ್ಲಿ ಸಂಗ್ರಹವಾದ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ದೊಣ್ಣೆ ಬಡಿಗೆಗಳಿಂದ ನಡುರಸ್ತೆಯಲ್ಲಿ ಬಡಿದಾಡಿಕೊಂಡ ಜನರನ್ನು ಪ್ರಶ್ನಿಸಿದ ಗುಂಪು ಹಾಗೂ ಟ್ರಸ್ಟ್ನ ಒಂದು ಗುಂಪಿನ ನಡುವೆ ಘರ್ಷಣೆ ನಡೆದಿದೆ. ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.
ಘಟನೆಯಲ್ಲಿ ಎರಡೂ ಗುಂಪಿನಿಂದ ಐವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.