ಹಾಸನ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ - Hassan News
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ
ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆಗಳಾಗಿವೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು. ಕಾರ್ಯಕರ್ತೆಯರಿಗೆ ಎಲ್ಲ ರೀತಿಯ ಸಂರಕ್ಷಣೆ ನೀಡಬೇಕು. ನೌಕರರೆಲ್ಲರಿಗೂ ತಾರತಮ್ಯವಿಲ್ಲದೆ, 50 ಲಕ್ಷ ವಿಮಾ ಪರಿಹಾರ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ನಿವೃತ್ತರಾಗಿರುವವರಿಗೆ ನಿವೃತ್ತಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.