ಹಾಸನ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಗರದಲ್ಲಿ ಈಚೆಗೆ ಏರ್ಪಡಿಸಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಕೌಸರ್ ಅಹಮದ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷದ್, ಭಜರಂಗ ದಳ ಆಗ್ರಹಿಸಿದೆ.
ಪೌರತ್ವ ಬಗ್ಗೆ ಪ್ರಚೋದನಕಾರಿ ಭಾಷಣ ಆರೋಪ: ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕನ ವಜಾ ಮಾಡಲು ಮನವಿ - ಕೌಸರ್ ಅಹಮದ್ ವಜಾ ಭಜರಂಗ ದಳ ಆಗ್ರಹ
ಕೇಂದ್ರ ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಗರದಲ್ಲಿ ಈಚೆಗೆ ನಡೆದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಕೌಸರ್ ಅಹಮದ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷದ್, ಭಜರಂಗ ದಳ ಒತ್ತಾಯಿಸಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಫೆ. 8 ರಂದು ನಗರದ ಹೊಸ ಈದ್ಗಾ ಮೈದಾನ ಆವರಣದಲ್ಲಿ ಏರ್ಪಡಿಸಿದ್ದ ಸಿಎಎ, ಎನ್‍ಆರ್‌ಸಿ ವಿರೋಧಿ ಪ್ರತಿಭಟನಾ ಸಮಾವೇಶದಲ್ಲಿ ಕೌಸರ್ ಅಹಮದ್ ಉರ್ದುವಿನಲ್ಲಿ ಮಾಡಿದ ಪ್ರಚೋದನಕಾರಿ ಭಾಷಣವನ್ನು ಕನ್ನಡಕ್ಕೆ ಅನುವಾದಿಸಲಾಗಿತ್ತು. ಕಾರ್ಯಕ್ರಮದಲ್ಲಿ ದೇಶ ವಿರೋಧಿ ಹೇಳಿಕೆಗಳಿಗೆ ಜೈಕಾರ ಹಾಕುವಂತೆ ಪ್ರೇರೇಪಿಸಿದ ವಿಡಿಯೊ ಸಹ ಲಭ್ಯವಿದೆ ಎಂದು ಉಲ್ಲೇಖಿಸಿದ್ದಾರೆ.
25 ವರ್ಷದಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅವರ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.ಸಿಎಎ ವಿಚಾರವನ್ನು ತಣ್ಣಗಾಗಿಸುವ ಬದಲು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.