ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ನರ್ಸಿಂಗ್ ವಿದ್ಯಾರ್ಥಿಗಳಿಂದ ಡಿಸಿ ಗೆ ಮನವಿ - Demand supply of nursing students

ವಿದ್ಯಾರ್ಥಿಗಳಿಗೆ ಊಟದ ವೆಚ್ಚವನ್ನು ಕೂಡ ಭರಿಸಲಾಗುತ್ತಿಲ್ಲ. ಹೀಗಾಗಿ ಇಂಟರ್ನ್​ಶಿಪ್‌ನಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ಸುರಕ್ಷಿತಾ ವಸ್ತುಗಳನ್ನು ನೀಡುವುದರೊಂದಿಗೆ ಆಹಾರದ ವ್ಯವಸ್ಥೆ ಮಾಡಬೇಕು..

appeal to DC from government nursing students to fulfill various demands
ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ನರ್ಸಿಂಗ್ ವಿದ್ಯಾರ್ಥಿಗಳಿಂದ ಡಿಸಿ ಗೆ ಮನವಿ

By

Published : Aug 7, 2020, 7:13 PM IST

ಹಾಸನ :ಸರ್ಕಾರಿ ನರ್ಸಿಂಗ್ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯ ಸುರಕ್ಷತಾ ಸಾಮಗ್ರಿ, ಆಹಾರ ವ್ಯವಸ್ಥೆ ಹಾಗೂ ಇಂಟರ್ನ್​ಶಿಪ್ ವೇತನ ನೀಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

​ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಇಂಟರ್ನ್​ಶಿಪ್‌ಗೆಂದು ಈಗಾಗಲೇ ವಿದ್ಯಾರ್ಥಿಗಳನ್ನು ಕರೆಸಿಕೊಂಡಿದ್ದಾರೆ. ಆದರೆ, ಕೊರೊನಾ ಹಿನ್ನೆಲೆ ಎಲ್ಲಾ ವರ್ಗದ ವಿದ್ಯಾರ್ಥಿಗಳ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳಿಗೆ ಊಟದ ವೆಚ್ಚವನ್ನು ಕೂಡ ಭರಿಸಲಾಗುತ್ತಿಲ್ಲ. ಹೀಗಾಗಿ ಇಂಟರ್ನ್​ಶಿಪ್‌ನಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ಸುರಕ್ಷಿತಾ ವಸ್ತುಗಳನ್ನು ನೀಡುವುದರೊಂದಿಗೆ ಆಹಾರದ ವ್ಯವಸ್ಥೆ ಮಾಡಬೇಕು. ಜೊತೆಗೆ ಇಂಟರ್ನ್​ಶಿಪ್ ವೇತನವನ್ನೂ ನೀಡಬೇಕು ಎಂದು ಒತ್ತಾಯಿಸಿದರು.

ಕೊರೊನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ನರ್ಸ್​ಗಳೊಂದಿಗೆ ನರ್ಸಿಂಗ್​ ವಿದ್ಯಾರ್ಥಿಗಳು ಕೂಡ ತಮ್ಮ ಜೀವದ ಹಂಗನ್ನು ತೊರೆದು ಸೇವೆಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಗಮನ ಹರಿಸಿ ವಿದ್ಯಾರ್ಥಿಗಳ ಬೇಡಿಕೆ ಪೂರೈಸಬೇಕಿದೆ ಎಂದರು.

ABOUT THE AUTHOR

...view details