ಅರಕಲಗೂಡು (ಹಾಸನ): ತಾಲೂಕಿನ ಗೌರಿಕೊಪ್ಪಲು ಗ್ರಾಮದಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದರಿಂದ ಆ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿತ್ತು. ಇಂದು ಲಾರಿ ಚಾಲಕನ ಕುಟುಂಬದ ಮೂವರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದೆ.
ಕೇವಲ 1 ಪಾಸಿಟಿವ್ ಹೊಂದಿದ್ದ ಅರಕಲಗೂಡು ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗತೊಡಗಿದೆ. ಮೊನ್ನೆ ಲಾರಿ ಚಾಲಕನಿಗೆ ತಗುಲಿದ್ದ ಕೊರೊನಾ ಇಂದು ಮತ್ತೆ ಆತನ ಕುಟುಂಬದ ಮೂರು ಮಂದಿಗೆ ತಗುಲಿದೆ. ಹೀಗಾಗಿ ಜಿಲ್ಲೆಯಲ್ಲಿ ಇಂದು ಕೊರೊನಾ ಪೀಡಿತರ ಸಂಖ್ಯೆ 215ಕ್ಕೆ ಏರಿಕೆಯಾಗಿದೆ.
ಲಾರಿ ಚಾಲಕ ಅರಕಲಗೂಡು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ತರಕಾರಿಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಎನ್ನಲಾಗಿದೆ. ಅನಾರೋಗ್ಯ ನಿಮಿತ್ತ ಸ್ವಯಂ ಪ್ರೇರಿತವಾಗಿ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾದ ವೇಳೆ ಕೊರೊನಾ ಪತ್ತೆಯಾಗಿದ್ದು, ಆತನನ್ನ ಹಾಸನದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.