ಅರಕಲಗೂಡು: ಪಟ್ಟಣದ ಶಿಕ್ಷಕರ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಹಾಸನ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಪಟ್ಟಣ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಅರಕಲಗೂಡು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜಯಂತಿ ಆಚರಣೆ ಮಾಡಲಾಯಿತು.
ಅರಕಲಗೂಡು: 130ನೇ ಅಂಬೇಡ್ಕರ್ ಜಯಂತಿ ಆಚರಣೆ - 130th-ambedkar-jayanti
ಹಾಸನ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಪಟ್ಟಣ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಅರಕಲಗೂಡು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜಯಂತಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಟಿ.ರಾಮಸ್ವಾಮಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಭಾರತವನ್ನು ಆಳುವ, ಕಟ್ಟುವ ಮತ್ತು ಬೆಳೆಸುವ ವಿಧಿ ವಿಧಾನದಿಂದ ಕೂಡಿರುವ ಒಂದು ಮಹಾನ್ ಗ್ರಂಥವಾಗಿದೆ. ನಾನು ಬಿಡುವಿನ ಸಮಯದಲ್ಲಿ ಅಂಬೇಡ್ಕರ್ ಅವರು ಬರೆದಿರುವ ಅನೇಕ ಪುಸ್ತಕಗಳನ್ನು ಓದುತ್ತೇನೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಮೈಗೂಡಿಸಿಕೊಂಡಾಗ ಮಾತ್ರ ಒಂದು ಆದರ್ಶ ವ್ಯಕ್ತಿಯಾಗಲು ಸಾಧ್ಯ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮ ಮಹೇಶ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಒಂದು ಅವಿನಾಭಾವ ಸಂಬಂಧವಿದೆ ಎಂದು ಹೇಳಿದರೂ ತಪ್ಪಾಗಲಾರದು. ಕೋಲಂಬಿಯಾ, ಲಂಡನ್, ಇಂಗ್ಲೇಡ್ಗಳಲ್ಲಿ ವಿಧ್ಯಾಬ್ಯಾಸ ಮುಗಿಸಿ 8 ಪದವಿಗಳನ್ನು ಪಡೆದು ದೇಶದ ಮಹಾನ್ ವ್ಯಕ್ತಿಯಾದವರು ಅಂಬೇಡ್ಕರ್ ಎಂದರು.