ಕರ್ನಾಟಕ

karnataka

ETV Bharat / state

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರೊಬ್ಬರು ಸಿಎಂ ಆಗ್ತಾರೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ..

Arogya Hastha Programme at hassan
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಆರೋಗ್ಯದ ಹಸ್ತ ಕಾರ್ಯಕ್ರಮ

By

Published : Sep 22, 2020, 3:13 PM IST

ಹೊಳೆನರಸೀಪುರ :ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರವಾಗಿರುವ ರೈತರಿಗೆ ಮರಣ ಶಾಸನವಾಗಿರುವ ಮೂರು ಬಿಲ್​ಗಳನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಭಾಷಾ ಒತ್ತಾಯಿಸಿದ್ದಾರೆ.

ಕಾಂಗ್ರೆಸ್​ನಿಂದ ಆರೋಗ್ಯ ಹಸ್ತ ಕಾರ್ಯಕ್ರಮ..

ಪಟ್ಟಣದ ಜಾಮಿಯಾ ಮಸೀದಿ ಆವರಣದಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನ ಪ್ರತಿ ಗ್ರಾಮ ಪಂಚಾಯತ್​ನಲ್ಲಿ ಇಬ್ಬರು ಕೊರೊನಾ ವಾರಿಯರ್ಸ್​ಗಳನ್ನು ಗುರುತಿಸಿ ಅವರುಗಳಿಗೆ ಭಾರತ ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ ಹಾಗೂ ಪಕ್ಷದ ವತಿಯಿಂದ ಆರೋಗ್ಯ ಹಸ್ತ ಕಿಟ್ ವಿತರಣೆ ಮಾಡಲಾಗುತ್ತಿದೆ. ಈ ಕಿಟ್‌ ಅಡಿ ಎರಡು ಲಕ್ಷದ ವಿಮೆ ಕೂಡ ಒಳಗೊಂಡಿರುತ್ತದೆ ಎಂದರು.

ಬಳಿಕ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಬಾಗೂರು ಮಂಜೇಗೌಡ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದರು.

ಈ ವೇಳೆ, ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಭಾರತಕ್ಕೆ ಇಂದಿರಾ ಗಾಂಧಿಯಂತಹ ಪ್ರಧಾನಿಗಳನ್ನು ಕೊಟ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದೆ ಎಂದು ಸ್ಮರಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಹೊನ್ನಿಕೊಪ್ಪಮಂಜೇಗೌಡ. ಕೋ- ಆರ್ಡಿನೇಟರ್ ಆದ ಮುಜಾಹಿದ್ ಪಾಷಾ ಜಲೇಂದ್ರ ಹಾಗೂ ರಿಯಾಜ್ ಉಪಸ್ಥಿತರಿದ್ದರು.

ABOUT THE AUTHOR

...view details