ಕರ್ನಾಟಕ

karnataka

ETV Bharat / state

ಮನೆಗಳ್ಳತನ ಪ್ರಕರಣ: ಕಳ್ಳನ ಬಂಧನ, 163 ಗ್ರಾಂ ಚಿನ್ನಾಭರಣ ವಶ - undefined

ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ. ವಕೀಲರ ಮನೆ ಸೇರಿದಂತೆ ಎರಡು ಮನೆಗಳಲ್ಲಿ ಕಳವು ಮಾಡಿದ್ದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಉಮೇಶ್ (42) ಬಂಧಿತ ಆರೋಪಿ

By

Published : Jun 23, 2019, 1:15 PM IST

ಹಾಸನ:ಮನೆಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.

ಉಮೇಶ್ (42) ಬಂಧಿತ ವ್ಯಕ್ತಿ.ಈತ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಜ್ಙೇನಹಳ್ಳಿ ಗ್ರಾಮದ ನಿವಾಸಿ.

ಬಂಧಿತನಿಂದ ಸುಮಾರು ₹ 5 ಲಕ್ಷ ಮೌಲ್ಯದ 163 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ವಕೀಲರ ಮನೆ ಸೇರಿದಂತೆ ಎರಡು ಮನೆಗಳಲ್ಲಿ ಕಳವು ಮಾಡಿದ್ದಾಗಿ ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದಾನೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

For All Latest Updates

TAGGED:

ABOUT THE AUTHOR

...view details