ಸಕಲೇಶಪುರ: ಆಶಾ ಕಾರ್ಯಕರ್ತೆಯರ ನಿರಂತರ ಶ್ರಮದಿಂದಾಗಿ ಕೋವಿಡ್-19 ಹರಡದಿರಲು ಸಹಾಯಕಾರಿ ಆಗಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.
ಆಶಾ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯ: ಶಾಸಕ ಎಚ್.ಕೆ. ಕುಮಾರಸ್ವಾಮಿ - ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಜ್ಯೂಸ್ ವಿತರಣೆ ಮಾಡಲಾಯಿತು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಜ್ಯೂಸ್ ವಿತರಿಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಕಳೆದ 3 ತಿಂಗಳಿಂದ ಕೋವಿಡ್- 19 ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ನಾವು ದೇವರ ರೂಪದಲ್ಲಿ ಆಶಾ ಕಾರ್ಯಕರ್ತೆಯರನ್ನು ನೋಡಬೇಕಾಗಿದೆ. ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ರೆಡ್ ಕ್ರಾಸ್ ಸಂಸ್ಥೆಯು ಮಾಸ್ಕ್ ಹಾಗೂ ಜ್ಯೂಸ್ ನೀಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ತಾ.ಪಂ. ಇ.ಓ ಹರೀಶ್, ತಾ. ವೈದ್ಯಾಧಿಕಾರಿ ಮಹೇಶ್, ತಾ.ಪಂ. ಸದಸ್ಯ ಯಡೇಹಳ್ಳಿ ಮಂಜುನಾಥ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳಾದ ಶಾರದಾ ಗುರುಮೂರ್ತಿ, ರೇಖಾ ಸುರೇಶ, ಹರೀಶ್ ಆಚಾರ್ ಮತ್ತಿತರರು ಹಾಜರಿದ್ದರು.