ಹಾಸನ: ಪೊಲೀಸ್ ಸಮವಸ್ತ್ರದಲ್ಲಿ ಮದ್ಯದ ಪಾರ್ಟಿಯಲ್ಲಿ ಭಾಗಿಯಾದ ಆರೋಪದ ಮೇಲೆ ಹಾಸನ ನಗರದ ಪೆನ್ಷನ್ ಮೊಹಲ್ಲಾ ಠಾಣೆಯ ಎಎಸ್ಐ ಹಾಗೂ ಹೆಡ್ ಕಾನ್ಸ್ಟೇಬಲ್ ಅನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಶ್ರೀನಿವಾಸಗೌಡ ಆದೇಶ ಹೊರಡಿಸಿದ್ದಾರೆ.
ಲಕ್ಷ್ಮಿಪುರಂ ಬಡಾವಣೆಯಲ್ಲಿರುವ ಖಾಸಗಿ ಬಾರೊಂದರಲ್ಲಿ ಪೊಲೀಸರು ಸಮವಸ್ತ್ರದಲ್ಲಿಯೇ ಮದ್ಯ ಸೇವಿಸುತ್ತಿದ್ದರು ಎನ್ನಲಾಗಿದೆ. ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಈ ವಿಡಿಯೋ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.