ಕರ್ನಾಟಕ

karnataka

ETV Bharat / state

ಆಸ್ತಿ ವಿಚಾರ: ಸ್ವಂತ ಮಗನಿಂದಲೇ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ - hasan Fatal assault on the father by his son news

ಬೇಲೂರು ತಾಲೂಕಿನ ಕಸಗೊಂಡು ಗ್ರಾಮದಲ್ಲಿ ಪುತ್ರ ತೀರ್ಥ ಕುಮಾರ್ ಹಲ್ಲೆ ನಡೆಸಿದ್ದು ಆಸ್ತಿ ವಿಚಾರವೇ ಗಲಾಟೆಗೆ ಕಾರಣ ಎನ್ನಲಾಗಿದೆ.

ಮಗನಿಂದಲೆ ತಂದೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಮಗನಿಂದಲೆ ತಂದೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

By

Published : Jun 5, 2020, 12:26 PM IST

ಹಾಸನ:ಬೇಲೂರು ತಾಲೂಕಿನ ಸಾಮಾಜಿಕ ಕಾರ್ಯಕರ್ತ ಕೆ.ಎಸ್. ತೀರ್ಥಪ್ಪ ಎನ್ನುವರ ಮೇಲೆ ಅವರ ಪುತ್ರನೇ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೇಲೂರು ತಾಲೂಕಿನ ಕಸಗೊಂಡು ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆಸ್ತಿ ವಿಚಾರವೇ ಗಲಾಟೆಗೆ ಕಾರಣ ಎನ್ನಲಾಗಿದೆ.

ತಾಲೂಕಿನ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿ ಕಚೇರಿ, ವಿಧಾನಸೌಧದವರೆಗೆ ಏಕಾಂಗಿಯಾಗಿ ಹೋರಾಟ ನಡೆಸುತ್ತಿದ್ದ ತೀರ್ಥಪ್ಪ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅರೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ABOUT THE AUTHOR

...view details