ಕರ್ನಾಟಕ

karnataka

ETV Bharat / state

ಅರಕಲಗೂಡಿನಲ್ಲಿ ಕೊರೊನಾ ಕುರಿತು ಜಾಗೃತಿ.. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವಿ - Awareness on Corona

ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಅಗ್ರಹಾರ ಗ್ರಾಮ ಪಂಚಾಯ್ತಿಗೆ ಸೇರಿದ ಗ್ರಾಮಗಳಲ್ಲಿ ಕೊರೊನಾ ಸೋಂಕು ಹರಡದಂತೆ ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.

Awareness on Corona at Arakkalagud
ಅರಕಲಗೂಡಿನಲ್ಲಿ ಕೊರೊನಾ ಕುರಿತು ಜಾಗೃತಿ

By

Published : Apr 9, 2020, 8:54 AM IST

ಹಾಸನ: ಕೊರೊನಾ ಭೀತಿ ಉಲ್ಬಣಿಸುತ್ತಿರುವ ಹಿನ್ನೆಲೆ ತಾಲ್ಲೂಕು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಗ್ರಾಮದ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ಜಿಲ್ಲೆಯ ಅರಕಲಗೂಡು ತಾಲ್ಲೂಕು ಸೇರಿದಂತೆ ಎಲ್ಲಾ ತಾಲ್ಲೂಕಿನಲ್ಲಿಯೂ ಕೊರೊನಾ ಜಾಗೃತಿ ಮೂಡಿಸಲಾಗುತ್ತಿದೆ. ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಅಗ್ರಹಾರ ಗ್ರಾಮ ಪಂಚಾಯ್ತಿಗೆ ಸೇರಿದ ನಿಂಗಾಪುರ, ಬೇಲಿಕರ್ಪೂರಹಳ್ಳಿ, ಕೋಟೆ ಕರ್ಪೂರಹಳ್ಳಿ ಗ್ರಾಮಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಕೊರೊನಾ ಸೋಂಕು ಹರಡದಂತೆ ಅನುಸರಿಸಬೇಕಾದ ಆರೋಗ್ಯ ಸುರಕ್ಷತಾ ಕ್ರಮಗಳು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಿದರು.

ಸಾರ್ವಜನಿಕರ ಅನಗತ್ಯ ಓಡಾಟದ ನಿರ್ಬಂಧದ ಮಹತ್ವ, ವೈಯಕ್ತಿಕ ಸ್ವಚ್ಚತೆ, ಸಾಮಾಜಿಕ ಅಂತರದ ಅಗತ್ಯತೆ ಹಾಗೂ ಮಾಸ್ಕ್ ಧರಿಸುವ ಅಗತ್ಯತೆ, ಅನಿವಾರ್ಯತೆ, ಸಾಂದರ್ಭಿಕತೆ ಮತ್ತು ವಿಧಾನದ ಬಗ್ಗೆ ಸಾರ್ವಜನಿಕರಿಗೆ ಹಾಗೂ ಕಾರ್ಯ ಪಡೆಯವರಿಗೆ ವಿವರಿಸಿದರು. ಕೊರೊನಾ ಸೋಂಕು ಹರಡದಂತೆ ಅನುಸರಿಸಬೇಕಾದ ಆರೋಗ್ಯ ಸುರಕ್ಷತಾ ಕ್ರಮಗಳು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಿದರು. ಜಿಲ್ಲೆಯ ರಾಮನಾಥಪುರ ಸಮೀಪದ ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯವರು, ಆಶಾ ಕಾರ್ಯಕರ್ತೆಯರು ಸ್ಥಳೀಯ ಚುನಾಯಿತ ಸದಸ್ಯರುಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಸಹಾಯಕ ಸಿಬ್ಬಂದಿಗಳು ಮತ್ತು ಊರ ಪ್ರಮುಖರು ಸೇರಿ ಕೊರೋನಾ ಜಾಗೃತಿಗಾಗಿ ಬೀದಿಗಳಲ್ಲಿ ಪ್ರಚಾರ ಮಾಡಿ ಮನೆ ಮನೆಗಳಿಗೆ ತೆರಳಿ ಕರಪತ್ರ ಹಂಚಿ ಜಾಗೃತಿ ಮೂಡಿಸಿದರು.

ಹೊಳೆನರಸೀಪುರ ಪಟ್ಟಣದ ನ್ಯಾಯಬೆಲೆ ಅಂಗಡಿಗೆ ಆಹಾರ ಶಿರಸ್ತೇದಾರ್ ಮತ್ತು ಉಪ ತಹಶಿಲ್ದಾರ್ ಭೇಟಿ ನೀಡಿ ಪಡಿತರ ವಿತರಣೆ ಬಗ್ಗೆ ಕ್ರಮಗಳು ಹಾಗೂ ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ವಹಿಸುವಂತೆ ತಿಳುವಳಿಕೆ ನೀಡಿದರು.

ABOUT THE AUTHOR

...view details