ಹಾಸನ :ಅಯೋಧ್ಯೆ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿ ಇಂದು ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ನಗರದಾದ್ಯಂತ ಭದ್ರತೆ ಹೆಚ್ಚಿಸಲಾಗಿತ್ತು. ಎಸ್ಪಿ ಡಾ. ರಾಮ್ ನಿವಾಸ್ ಸಪೆಟ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.
ಅಯೋಧ್ಯೆ ತೀರ್ಪು ಹಿನ್ನೆಲೆ ಹಾಸನದಲ್ಲಿ ಎಸ್ಪಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ - Police security for Ayodhya verdict in Hassan
ಅಯೋಧ್ಯೆ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿ ಇಂದು ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಹಾಸನ ನಗರದಾದ್ಯಂತ ಭದ್ರತೆ ಹೆಚ್ಚಿಸಲಾಗಿತ್ತು. ಎಸ್ಪಿ ಡಾ. ರಾಮ್ ನಿವಾಸ್ ಸಪೆಟ್ ನೇತೃತ್ವದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಜಿಲ್ಲೆಯಾದ್ಯಂತ 3 ಕೆಎಸ್‌ಆರ್‌ಪಿ, 17 ಡಿಎಆರ್ ತುಕಡಿ ಸೇರಿ 700 ಪೊಲೀಸರು ಭದ್ರತೆಗೆ ನಿಯೋಜಿಸಲಾಗಿತ್ತು. 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಶಾಲಾ-ಕಾಲೇಜಿಗೆ ರಜೆ ನೀಡಲಾಗಿತ್ತು. ಇಂದು ಬೆಳಗ್ಗೆ 6ರಿಂದ ನಾಳೆ ಬೆಳಗ್ಗೆ 6ರವರಗೆ ಮದ್ಯ ನಿಷೇಧಿಸಲಾಗಿದೆ. ನಾಳೆ ಈದ್ ಮಿಲಾದ್ ಇರುವುದರಿಂದ ಮದ್ಯ ನಿಷೇಧಿಸಲು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆಯಲಾಗುವುದು. ಮುನ್ನೆಚ್ಚರಿಕಾ ದೃಷ್ಟಿಯಿಂದ ನಗರದ ವಿವಿಧ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಾಳೆಯೂ ಸಹ ಭದ್ರತೆ ಮುಂದುವರೆಸುವುದಾಗಿ ತಿಳಿಸಿದರು.
ಇನ್ನು ಜಿಲ್ಲೆಯಲ್ಲಿ ಎಂದಿನಂತೆ ಜನಜೀವನ ಹಾಗೂ ವಾಹನ ಓಡಾಟ ಸಾಮಾನ್ಯವಾಗಿತ್ತು. ನಿನ್ನೆ ರಾತ್ರಿಯಿಂದಲೇ ಪೊಲೀಸ್ ಸಿಬ್ಬಂದಿ ಆಯಕಟ್ಟಿನ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕಟ್ಟೆಚ್ಚರ ವಹಿಸಿದ್ದರು. ತೀರ್ಪು ಬಂದ ನಂತರ ಸಂಭ್ರಮಾಚರಣೆ, ಪ್ರತಿಭಟನೆ ನಡೆಸದಂತೆ ಕಟ್ಟೆಚ್ಚರ ವಹಿಸಿದ್ದರು.
TAGGED:
ಹಾಸನದಲ್ಲಿ ಪೊಲೀಸ್ ಪಥಸಂಚಲನ