ಹಾಸನದ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಆಸ್ಪತ್ರೆಗಳಿಗೆ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಜ್ಞ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ನಿರ್ಧರಿಸಲಾಗಿದೆ. ಈ ಹುದ್ದೆಗಳಿಗೆ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಆಯುಷ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ತಜ್ಞ ವೈದ್ಯರು (ಆಯುರ್ವೇದ), ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) ಅಟೆಂಡೆಂಟ್, ಸಮುದಾಯ ಆರೋಗ್ಯ ಅಧಿಕಾರಿ, ಔಷಧಿ ವಿತರಕರು, ಮಸಾಜಿಸ್ಟ್, ಸ್ತ್ರೀ ರೋಗ ಅಟೆಂಡೆಂಟ್, ಮಲ್ಟಿ ಪರ್ಪಸ್ ವರ್ಕರ್ ಸೇರಿದಂತೆ ಒಟ್ಟು 18 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ವಿದ್ಯಾರ್ಹತೆ:ಬಿಎಎಂಎಸ್ ಪದವಿ, 10ನೇ ತರಗತಿ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ವಿವಿಧ ಕೋರ್ಸ್ ಮತ್ತು ಅನುಭವ ಹೊಂದಿರಬೇಕು.
ವಯೋಮಿತಿ ಸಡಿಲಿಕೆ: ಕನಿಷ್ಟ 18 ವರ್ಷ ಪೂರೈಸಿದ್ದು, ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ: ಅಭ್ಯರ್ಥಿಗಳು ಹಾಸನದಲ್ಲಿ ಕಾರ್ಯ ನಿರ್ವಹಿಸಬೇಕಿದೆ. ವಿವಿಧ ಹುದ್ದೆಗಳ ಶ್ರೇಣಿಗೆ ಅನುಸಾರವಾಗಿ 10,300 ರಿಂದ 35,000 ರೂ.ವರೆಗೆ ವೇತನ ನಿಗದಿ ಮಾಡಲಾಗಿದೆ.