ಅರಕಲಗೂಡು: ಸಾಮಾಜಿಕ ಹಾಗೂ ಶೋಷಿತರಪರ ಹೋರಾಟಗಾರ ಮತ್ತು ಭೀಮ್ ಆರ್ಮಿ ಸಂಸ್ಥಾಪಕರಲ್ಲೊಬ್ಬರಾದ ಸಂಪತ್ ಸುಬ್ಬಯ್ಯ ಅವರ ಸಮಾಜ ಸೇವೆ ಶ್ಲಾಘನೀಯ ಎಂದು ಮಾಜಿ ಸಚಿವ ಬಿ. ಶಿವರಾಂ ಹೇಳಿದರು.
ಭೀಮ್ ಆರ್ಮಿ ರಾಜ್ಯಾಧ್ಯಕ್ಷರ ಮನೆಗೆ ಮಾಜಿ ಸಚಿವ ಬಿ. ಶಿವರಾಂ ಭೇಟಿ - B shivaram latest news
ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಸಂಪತ್ ಸುಬ್ಬಯ್ಯ ಅವರ ಮನೆಗೆ ಮಾಜಿ ಸಚಿವ ಬಿ. ಶಿವರಾಂ ಭೇಟಿ ನೀಡಿ ಕುಟುಂಬ ಸದಸ್ಯರ ಜೊತೆ ಕುಶಲೋಪರಿ ವಿಚಾರಿಸಿದರು.
B Shivram visits ulelnahalli village
ತಾಲೂಕಿನ ಕೊಣನೂರು ಹೋಬಳಿಯ ಉಳ್ಳೇನಹಳ್ಳಿ ಗ್ರಾಮದಲ್ಲಿರುವ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಸಂಪತ್ ಸುಬ್ಬಯ್ಯ ಅವರ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರ ಜೊತೆ ಕುಶಲೋಪರಿ ವಿಚಾರಿಸಿದರು. ತಮ್ಮ ನಿವಾಸಕ್ಕೆ ಆಗಮಿಸಿದ ಶಿವರಾಂ ಅವರಿಗೆ ಸುಬ್ಬಯ್ಯ ಕುಟುಂಬದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ರಂಜಿತ್ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.