ಕರ್ನಾಟಕ

karnataka

ETV Bharat / state

ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನಾರಂಭ

ಭೂಕುಸಿತದಿಂದ ಸ್ಥಗಿತವಾಗಿದ್ದ ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೆ ಮಾರ್ಗದಲ್ಲಿ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಕಳೆದ 2-3 ದಿನಗಳಿಂದ ರೈಲು ಇಂಜಿನ್, ಗೂಡ್ಸ್ ರೈಲುಗಳನ್ನು ಪ್ರಾಯೋಗಿಕವಾಗಿ ಸಂಚಾರ ನಡೆಸಿ ಪರೀಕ್ಷಿಸಲಾಗಿತ್ತು. ಕಳೆದ ರಾತ್ರಿಯಿಂದ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಚಾರ ಪುನಾರಂಭ

By

Published : Aug 27, 2019, 2:02 AM IST

ಹಾಸನ: ಭೂಕುಸಿತದಿಂದ ಸ್ಥಗಿತವಾಗಿದ್ದ ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೆ ಮಾರ್ಗದಲ್ಲಿ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ಪುನಾರಂಭವಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರೈಲು ಸಂಚಾರ ಸ್ಥಗಿತವಾಗಿತ್ತು. ಕಳೆದ 2-3 ದಿನಗಳಿಂದ ರೈಲು ಇಂಜಿನ್, ಗೂಡ್ಸ್ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಿ ಪರೀಕ್ಷಿಸಲಾಗಿದೆ. ಕಳೆದ ರಾತ್ರಿಯಿಂದ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಚಾರ ಪುನಾರಂಭ

ಭಾರಿ ಮಳೆಯ ನಡುವೆಯೇ ಭೂಕುಸಿತ ಸಂಭವಿಸಿದ್ದರಿಂದ ಜು.23 ರಿಂದ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಿತ್ತು. ತೆರವು ಕಾರ್ಯಾಚರಣೆ ಬಳಿಕ ಸಂಚಾರ ಪುನಾರಂಭವಾಗಿತ್ತು. ಆದರೆ ನಿರಂತರ ಭೂಕುಸಿತ ಮತ್ತು ಹಳಿಯ ಅಡಿಯಲ್ಲಿನ ಮಣ್ಣು ಕೊಚ್ಚಿಹೋದ ಕಾರಣ ಆ.9 ರಿಂದ ಮತ್ತೆ ರೈಲು ಸಂಚಾರ ಇರಲಿಲ್ಲ. ರೈಲ್ವೆ ಹಳಿಯ ಮೇಲೆ ಬಿದ್ದಿದ್ದ ಮಣ್ಣು, ಕಲ್ಲಿನ ರಾಶಿಯನ್ನು ನಿರಂತರ ಕಾರ್ಯಾಚರಣೆ ಮೂಲಕ ತೆರವು ಮಾಡಲಾಗಿದೆ.

ಹಳಿಯ ಅಡಿಯಲ್ಲಿ ಮಣ್ಣು ಕೊಚ್ಚಿಹೋಗಿದ್ದ ಸ್ಥಳಗಳಲ್ಲೂ ದುರಸ್ತಿ ಮಾಡಲಾಗಿದ್ದು, 55 ಕಿ.ಮೀ ಉದ್ದದ ಮಾರ್ಗ ಈಗ ರೈಲು ಸಂಚಾರಕ್ಕೆ ಸಂಪೂರ್ಣ ಸಿದ್ಧವಾಗಿದೆ. ಭಾನುವಾರದಿಂದಲೇ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನಾರಂಭ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಹಿರಿಯ ವಿಭಾಗೀಯ ಕಾರ್ಯನಿರ್ವಹಣಾ ವ್ಯವಸ್ಥಾಪಕ ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details